ರಾಯಚೂರು: ಇನ್‌ಸ್ಟಾಗ್ರಾಂ ಆಪ್ ಮೂಲಕ ವ್ಯಕ್ತಿಯೊಬ್ಬರೊಂದಿಗೆ ಕಳೆದ 15 ದಿನಗಳಿಂದ ನಿರಂತರವಾಗಿ ಸಂದೇಶ ವಿನಿಮಯ ಮಾಡಿಕೊಂಡು, ಪ್ರಚೋದನಕಾರಿ ಸಂದೇಶಗಳನ್ನು ಸ್ವೀಕರಿಸಿದ್ದ ಆರೋಪದ ಮೇರೆಗೆ 24 ವರ್ಷದ ಮೊಹಮ್ಮದ್ ಶಾಹೀಲ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಆ.7ರಂದು ರಾಯಚೂರು ನಗರದ ಮೊಹಮ್ಮದ್ ಶಾಹೀಲ್, ‘ರಾಣಾ ಬಾಯ್’ ಎಂಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಕಳೆದ 15 ದಿನಗಳಿಂದ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ರಾಣಾ ಬಾಯ್ ಎಂಬಾತ ಶಾಹೀಲ್‌ಗೆ ಪ್ರಚೋದನೆ ನೀಡುವ ರೀತಿಯ ಸಂದೇಶಗಳನ್ನು ಕಳುಹಿಸಿರುವುದು ಆತನ ಮೊಬೈಲ್ ಪರಿಶೀಲನೆಯ ವೇಳೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ರಾಯಚೂರಿನ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.





Recent Comments