ರಾಯಚೂರು. ಜು.9, – ತುಂಗಭದ್ರಾ ಜಲಾಶಯದ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರನ್ನು ಹರಿಸಲು ನಿರ್ದರಿಸಲಾಗಿದೆ. ತೂಬುಗಳ ಗೇಟ್‌ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಲು ಹಾಗೂ ನಿಗದಿತ ಪ್ರಮಾಣದ ನೀರನ್ನು 104 ಮೈಲ್ ವರೆಗೆ ಹರಿಸಿ ಮತ್ತು ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಸಮರ್ಪಕ ನೀರು ನಿರ್ವಹಣೆ ಮಾಡಬೇಕು. ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಗೆ ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಜುಲೈ 10ರ ಬೆಳಗ್ಗೆ 8 ಗಂಟೆ ರಿಂದ ಜುಲೈ 23 ರ ಗುರುವಾರ ರಾತ್ರಿ 8 ಗಂಟೆವರೆಗೆ 2,000 ಕ್ಯೂಸೆಕ್ಸ್ ನಂತೆ ಕುಡಿಯುವ ನೀರು ಹರಿಸಲಾಗುವುದು.ಅದರಂತೆ, ಯರಮರಸ್ ವಿಭಾಗದಲ್ಲಿ ಜುಲೈ 13 ರಿಂದ ಜುಲೈ 16 ರವರೆಗೆ, ಸಿರವಾರ ವಿಭಾಗದಲ್ಲಿ ಜುಲೈ 17 ರಿಂದ 19 ರವರೆಗೆ, ಸಿಂಧನೂರು ವಿಭಾಗದಲ್ಲಿ ಜುಲೈ 20 ರಿಂದ 22 ರವರೆಗೆ ಮತ್ತು ವಡ್ಡರಹಟ್ಟಿ ವಿಭಾಗದಲ್ಲಿ ಜುಲೈ 22 ಮತ್ತು 23 ರಂದು ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.ರೈತ ಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕ ಹಿತ ದೃಷ್ಟಿಯಿಂದ ಎಲ್ಲಾ ಜನಸಾಮಾನ್ಯರಿಗೂ ಹಾಗೂ ರೈತ ಭಾಂದವರಿಗೆ ಈ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ. ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ. ಕಾರಣ ತಾವುಗಳು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments