ರಾಯಚೂರು ಜೂನ್ 29- ಜಿಲ್ಲಾದ್ಯಂತ ಭಾನುವಾರ ನಡೆದ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ 2,60,002 ಗುರಿ ಪೈಕಿ 2,48,323 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಶೇ.96ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರು ತಿಳಿಸಿದ್ದಾರೆ.ಪೋಲಿಯೋ ಕಾರ್ಯಕ್ರಮದಡಿ 5 ವರ್ಷದೊಳಗಿನ ಸಾವಿರಾರು ಮಕ್ಕಳಿಗೆ ಲಸಿಕೆ ಹಾಕಲಾಯಿತು. ಸಾರಿಗೆ ಬಸ್ ನಿಲ್ದಾಣ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆನೇಕ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಯಿತು. ಆಸ್ಪತ್ರೆಗೆ ಬಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಸಾಧ್ಯವಾಗದಂತಹ ಅಲೆಮಾರಿ ಜನಾಂಗ ಎಲ್ಲೆಲ್ಲಿ ಇದ್ದಾರೋ ಅವರನ್ನು ಗುರುತಿಸಿ ಲಸಿಕೆ ಹಾಕಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿತ್ತು.ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಹಾಯಕಿಯರು ಬಳಸಿಕೊಳ್ಳಲಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments