Sunday, August 16, 2026
Google search engine
Homeರಾಯಚೂರುರಾಯಚೂರು ನಗರಮಂತ್ರಾಲಯದಲ್ಲಿ ಕುಡಿಯುವ ನೀರಿನ ಸಂಗ್ರಹ ಜಲಾಶಯ ನಿರ್ಮಾಣಕ್ಕೆ ಭೂಮಿಪೂಜೆ

ಮಂತ್ರಾಲಯದಲ್ಲಿ ಕುಡಿಯುವ ನೀರಿನ ಸಂಗ್ರಹ ಜಲಾಶಯ ನಿರ್ಮಾಣಕ್ಕೆ ಭೂಮಿಪೂಜೆ

ಮಂತ್ರಾಲಯ, ಜುಲೈ 30, 2026: ಶ್ರೀ ಕ್ಷೇತ್ರ ಮಂತ್ರಾಲಯದಲ್ಲಿ ಕುಡಿಯುವ ನೀರಿನ ಸಂಗ್ರಹ ಜಲಾಶಯ ನಿರ್ಮಾಣ ಕಾಮಗಾರಿಗೆ ಗುರುವಾರ ಭವ್ಯ ಭೂಮಿಪೂಜೆ ನೆರವೇರಿತು. ಕಾರ್ಯಕ್ರಮವು ಪರಮ ಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಎಚ್‌ಎಎಲ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ರವಿ ಕೆ., ಸಂಸ್ಥೆಯ ಹಿರಿಯ ಅಧಿಕಾರಿಗಳು, ಶ್ರೀಮಠದ ಅಧಿಕಾರಿಗಳು, ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.ಸುಮಾರು ₹50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಎಚ್‌ಎಎಲ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಯೋಜನೆಯಡಿ ಕೈಗೆತ್ತಿಕೊಂಡಿದೆ. ಯೋಜನೆ ಪೂರ್ಣಗೊಂಡ ಬಳಿಕ ಮಂತ್ರಾಲಯದ ಭಕ್ತರು ಹಾಗೂ ಸ್ಥಳೀಯ ನಿವಾಸಿಗಳ ಕುಡಿಯುವ ನೀರಿನ ಅಗತ್ಯಗಳಿಗೆ ಶಾಶ್ವತ ಮತ್ತು ದೀರ್ಘಕಾಲೀನ ಪರಿಹಾರ ದೊರೆಯಲಿದೆ.ಜಲಾಶಯ ನಿರ್ಮಾಣದಿಂದ ನೀರಿನ ಸಂಗ್ರಹಣೆ ಮತ್ತು ಪೂರೈಕೆ ವ್ಯವಸ್ಥೆ ಮತ್ತಷ್ಟು ಬಲವಾಗಲಿದ್ದು, ಭವಿಷ್ಯದಲ್ಲಿಯೂ ನೀರಿನ ಕೊರತೆಯನ್ನು ಸಮರ್ಥವಾಗಿ ಎದುರಿಸಲು ಸಹಕಾರಿಯಾಗಲಿದೆ.ಈ ಸಂದರ್ಭದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಯೋಜನೆ ಯಶಸ್ವಿಯಾಗಲೆಂದು ಆಶೀರ್ವದಿಸಿ, ಇಂತಹ ಐತಿಹಾಸಿಕ ಯೋಜನೆಗೆ ಉದಾರ ಸಹಾಯ ನೀಡುತ್ತಿರುವ ಎಚ್‌ಎಎಲ್ ಸಂಸ್ಥೆಗೆ ಸಂತೋಷ ವ್ಯಕ್ತಪಡಿಸಿದರು.

RELATED ARTICLES
- Advertisment -
Google search engine

Most Popular

Recent Comments