ರಾಯಚೂರು: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಯಲ್ಲಿ ಭ್ರಷ್ಟಚಾರ ಎಸೆಗಿರುವ ಆರೋಪ ಸಾಬೀತುಗೊಂಡ ಹಿನ್ನಲೆಯಲ್ಲಿ ಮಾನ್ವಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶಿವಗಂಗಮ್ಮ ರಾಯಚೂರು ಜಿ.ಪಂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ರವರ ವರದಿಯನ್ನಾಧಾರಿಸಿ ಅಮಾನತ್ತು ಆದೇಶ ಹೊರಡಿಸಿದ ಸರ್ಕಾರ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.ಮಾನ್ವಿ ತಾಲೂಕಿನ ಬಾಬಾನಾಯಕ ಕಾಲೋನಿ, ಯರಮಲದೊಡ್ಡಿ ಹಾಗೂ ಉಮಳಿ ಹೊಸೂರು-2 ಅಂಗನವಾಡಿ ಕೇಂದ್ರಗಳ ಸಹಾಯಕಿ ಹಾಗೂ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಭ್ರಷ್ಟಚಾರ ಎಸೆಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯು ತನಿಖಾ ತಂಡವನ್ನು ರಚಿಸಲಾಗಿತ್ತು. ಮಾನ್ಸಿ ತಾಲೂಕಿನ ಬಾಬಾನಾಯಕ ಕಾಲೋನಿ, ಯರಮಲದೊಡ್ಡಿ ಮತ್ತು ಉಮಳಿ ಹೊಸೂರು-2 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯಲ್ಲಿ ಭ್ರಷ್ಟಾಚಾರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿ ಸಲ್ಲಿಸಿರುವ ಪ್ರಾಥಮಿಕ ವರದಿಯನ್ನಾಧಾರಿಸಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ ರಾಯಚೂರು ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರವರ ಅಭಿಪ್ರಾಯದನ್ವಯ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅವರಿಗೆ ವಹಿಸಿರುವ ಕರ್ತವ್ಯಗಳ ನಿರ್ವಹಣೆ ಸಂದರ್ಭದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ತನಿಖಾ ತಂಡದ ವರದಿಯಿಂದ ಮೇಲ್ನೋಟಕ್ಕೆ ಸಾಬೀತಾಗಿದೆ.ಮಹಿಳೆಯರ ಮತ್ತು ಮಕ್ಕಳ ಹಾಗೂ ಅಭಿವೃದ್ಧಿ ಹಾಗೂ ವಿಕಲಚೇತನರ ಹಿರಿಯ ನಾಗರೀಕರ ಸಬಲೀಕರಣ ಸಚಿವಾಲಯ ಸರ್ಕಾರದ ಅಧೀನಕಾರ್ಯದರ್ಶಿ-2 ರಶ್ಮಿ ಎಂ.ಎಸ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಪೂರ್ವನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಹಾಗೂ ಇಲಾಖೆಯ ವಿಚಾರಣೆ ಮುಂದುವರೆಸಲಾಗಿದೆ.





Recent Comments