ರಾಯಚೂರು. ಜೂನ್. 30. ರಾಯಚೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಪ್ರಸ್ತುತ ಪುತ್ಥಳಿಯನ್ನು ನವೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳ ನಿಮಿತ್ತ ತಾತ್ಕಾಲಿಕವಾಗಿ ತೆರವುಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪೂವಿತ್ ತಿಳಿಸಿದ್ದಾರೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಪ್ರಸ್ತುತ ಪುತ್ಥಳಿಯ ನವೀಕರಣ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶದಿಂದ, ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಸದರಿ ಪುತ್ಥಳಿಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗುವುದು. ಕಾಮಗಾರಿಗಳನ್ನು ಸಾರ್ವಜನಿಕರ ಅನುಕೂಲತೆ ಹಾಗೂ ಸ್ಥಳದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಪೂರ್ಣಗೊಂಡ ನಂತರ ನಿಯಮಾನುಸಾರ ಪುನಃ ಪುತ್ಥಳಿಯನ್ನು ಸ್ಥಾಪಿಸಲಾಗುತ್ತದೆ.ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಕಾಮಗಾರಿ ಅವಧಿಯಲ್ಲಿ ಅನಗತ್ಯ ಗೊಂದಲ ಅಥವಾ ವದಂತಿಗಳಿಗೆ ಅವಕಾಶ ನೀಡದಂತೆ ಕೋರಲಾಗಿದೆ. ಸದರಿ ಸ್ಥಳದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments