ರಾಯಚೂರು ಜೂ. 26 – ರಾಯಚೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಪೋಷಕರು ಬಾಲಕಿಯ ಮದುವೆ ಮಾಡಲು ಮುಂದಾಗಿದ್ದ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಗುರುವಾರ ಬಾಲ್ಯ ವಿವಾಹ ತಡೆದಿದ್ದಾರೆ.ಬಾಲ್ಯ ವಿವಾಹ ಮಾಡಲು ಪೋಷಕರು ಗುರುವಾರ ಸಕಲ ತಯಾರಿ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಲಕ್ಷ್ಮೀ, ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನಿರ್ಮಲ ಎಮ್ ಅವರು ಜಂಟಿ ಕಾರ್ಯಚರಣೆಯ ಮೂಲಕ ಕೂಡ್ಲೂರು ಗ್ರಾಮದ ಬಾಲಕಿಯ ಮನೆ ಭೇಟಿ ನೀಡಿ, ಬಾಲ್ಯ ವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಣೆ ಮಾಡಿ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಸೇರಿಸಲಾಗಿದೆ ಎಂದು ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments