ರಾಯಚೂರು ಆಗಸ್ಟ್ 29 ,ಎಸ್ಸಿಎಸ್ಟಿ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಆಗಸ್ಟ್ 30 ಹಾಗೂ 31ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಅವರು ಆಗಸ್ಟ್ 30ರ ಬೆಳಗ್ಗೆ 8.30 ರಿಂದ ರಾಯಚೂರು ನಗರದಿಂದ ನಿರ್ಗಮಿಸಿ, ಮಧ್ಯಾಹ್ನ 1.45ಕ್ಕೆ ಗಂಟೆಯವರೆಗೆ ದೌರ್ಜನ್ಯ ಪ್ರಕರಣದಲ್ಲಿ ಮೃತಪಟ್ಟ ದೇವದುರ್ಗ ತಾಲೂಕಿನ ಹದ್ದಿನಾಳ, ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮ ಮತ್ತು ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ 3ಗಂಟೆಯಿAದ ಸಮಾಜ ಕಲ್ಯಾಣ ಇಲಾಖೆಯ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 31ರ ಬೆಳಗ್ಗೆ 10.30ಗಂಟೆಗೆ ರಾಯಚೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧೀಕ್ಷಕರು ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಸಂಘ-ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಭೆ ಮತ್ತು ಅಹ್ವಾಲು ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ.
ಮಧ್ಯಾಹ್ನ 2.15 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments