Saturday, September 12, 2026
Google search engine
Homeಮುಖ್ಯಾಂಶಗಳುಜಿಲ್ಲೆಯಲ್ಲಿ 2,570 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ: ವ್ಯಾಪಕ ಪೊಲೀಸ್ ಬಂದೋಬಸ್ತ್

ಜಿಲ್ಲೆಯಲ್ಲಿ 2,570 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ: ವ್ಯಾಪಕ ಪೊಲೀಸ್ ಬಂದೋಬಸ್ತ್

ರಾಯಚೂರು: ಜಿಲ್ಲೆಯಲ್ಲಿ ಸೆಪ್ಟೆಂಬರ್ 14, 2026ರಂದು ಗಣೇಶ ಚತುರ್ಥಿ ಅಂಗವಾಗಿ ಭಾರಿ ಸಂಖ್ಯೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಎಸ್ಪಿ ಅರುಣಾಂಷ್ಗುಗಿರಿ ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಒಟ್ಟು 2,570 ಗಣೇಶ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿವೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸುವ ಉದ್ದೇಶದಿಂದ ಎಲ್ಲಾ ಗಣೇಶ ಮಂಡಳಿಗಳಿಂದ ಮುಚ್ಚಳಿಕೆ ಪತ್ರಗಳನ್ನು ಬರೆಯಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ರಾಯಚೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಗ್ರಾಮಗಳಲ್ಲಿ ವಿವಿಧ ಸಮುದಾಯಗಳ ಮುಖಂಡರು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡು ಶಾಂತಿ ಸಭೆಗಳನ್ನು ನಡೆಸಲಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಸಹಕಾರ ಮತ್ತು ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.1,454 ರೌಡಿಶೀಟರ್‌ಗಳ ವಿರುದ್ಧ ಮುಂಜಾಗ್ರತಾ ಕ್ರಮಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಜಿಲ್ಲೆಯಲ್ಲಿ ಪ್ರಚಲಿತದಲ್ಲಿರುವ ಒಟ್ಟು 1,557 ರೌಡಿ ಆಸಾಮಿಗಳ ಪೈಕಿ 1,454 ಜನರ ವಿರುದ್ಧ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.ಇವರ ಪೈಕಿ 1,124 ಜನರಿಂದ ತಾಲೂಕು ದಂಡಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಮುಂದೆ ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳಲಾಗಿದೆ. ಅಲ್ಲದೆ, 23 ಜನರ ವಿರುದ್ಧ ಗಡಿಪಾರು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಿಗಿ ಭದ್ರತಾ ವ್ಯವಸ್ಥೆಗಣೇಶೋತ್ಸವದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, 630 ಹೆಡ್ ಕಾನ್ಸ್‌ಟೇಬಲ್/ಪೊಲೀಸ್ ಕಾನ್ಸ್‌ಟೇಬಲ್‌ಗಳು, 500 ಗೃಹರಕ್ಷಕ ದಳ ಸಿಬ್ಬಂದಿ, ಸಶಸ್ತ್ರ ಮೀಸಲು ಪಡೆಯ 10 ತುಕಡಿಗಳು, ಕೆಎಸ್‌ಆರ್‌ಪಿ 6 ತುಕಡಿಗಳು ಹಾಗೂ ಎಎಸ್‌ಸಿ ಒಂದು ತಂಡವನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳ ಸಂದರ್ಭದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ನಿಗಾ ವಹಿಸಲಾಗುವುದು ಎಂದು ತಿಳಿಸಲಾಗಿದೆ.ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮಗಣೇಶೋತ್ಸವದ ಆಚರಣೆಯ ನೆಪದಲ್ಲಿ ಮಾದಕ ದ್ರವ್ಯ ಹಾಗೂ ಮದ್ಯ ಸೇವಿಸಿ ಅಸಭ್ಯವಾಗಿ ವರ್ತಿಸುವವರು, ಬೈಕ್ ವೀಲಿಂಗ್ ನಡೆಸುವ ಯುವಕರು, ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೊಂದರೆ ಅಥವಾ ಕಿರಿಕಿರಿ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಅಲ್ಲದೆ, ನಿಷೇಧಿತ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ಗಣೇಶೋತ್ಸವವನ್ನು ಧಾರ್ಮಿಕ ಭಾವನೆ, ಸೌಹಾರ್ದತೆ ಮತ್ತು ಶಾಂತಿಯುತ ವಾತಾವರಣದಲ್ಲಿ ಆಚರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳ ಪದಾಧಿಕಾರಿಗಳು ಸಹಕರಿಸಬೇಕು ಎಂದು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments