Sunday, August 16, 2026
Google search engine
Homeಕೃಷಿ / ಬಜಾರ್ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವ ಡಾ. ಅಜಯ್ ಧರ್ಮಸಿಂಗ್: ಅಧಿಕಾರಿಗಳೊಂದಿಗೆ ಚರ್ಚೆ, ರೈತರೊಂದಿಗೆ ಸಮಾಲೋಚನೆ

ಜಿಲ್ಲೆಯ ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವ ಡಾ. ಅಜಯ್ ಧರ್ಮಸಿಂಗ್: ಅಧಿಕಾರಿಗಳೊಂದಿಗೆ ಚರ್ಚೆ, ರೈತರೊಂದಿಗೆ ಸಮಾಲೋಚನೆ

ರಾಯಚೂರು, ಆ. 7 -: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ, ಕುಡಿಯುವ ನೀರಿನ ಕೊರತೆ ಮತ್ತು ಬೆಳೆ ಹಾನಿಯ ಸಮಗ್ರ ಅಧ್ಯಯನಕ್ಕಾಗಿ ಸಂಪುಟ ಸಚಿವ ಡಾ. ಅಜಯ್ ಧರ್ಮಸಿಂಗ್ ಅವರು ಇಂದು ರಾಯಚೂರು ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದಲ್ಲಿ ಎಲ್ಲಾ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆಆ.7 ಮತ್ತು 8ರಂದು ಎರಡು ದಿನಗಳ ಪ್ರವಾಸ ಕೈಗೊಂಡಿರುವ ಸಚಿವರು, ಇಂದು ರಾಯಚೂರು ಗ್ರಾಮಾಂತರ, ದೇವದುರ್ಗ, ಲಿಂಗಸುಗೂರು ಹಾಗೂ ಮಸ್ಕಿ ತಾಲೂಕುಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸವನಗೌಡ ದದ್ದಲ್. ಜಿಲ್ಲಾಧಿಕಾರಿ ಪೂವಿತಾ ಎಸ್. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ. ಕೃಷಿ ಇಲಾಖೆಯ ಜಂಟಿ ನಿರ್ದೆಶಕರು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು.ಸಭೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಹತ್ತಿ , ಭತ್ತ, ಮುಂಗಾರು ಹಂಗಾಮಿನ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿರುವುದಾಗಿ ವರದಿಯಾಗಿದೆ. ಅಂತರ್ಜಲ ಮಟ್ಟವು ಗಣನೀಯವಾಗಿ ಕುಸಿದಿದ್ದು ಈ ಬೇಸಿಗೆಯ ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಇಲ್ಲಾ ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. ಸಚಿವರು ರೈತರ ಸಂಪೂರ್ಣ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವರದಿಗಳ ಸಮೇತ ವಿವರವಾದ ಚರ್ಚೆ ನಡೆಸಿದರು. ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳ ಬಗ್ಗೆ ಸಚಿವರು ಮಾರ್ಗದರ್ಶನ ನೀಡಿದರು. ಆ.8ರಂದು ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲೂಕುಗಳಿಗೆ ಭೇಟಿ ನೀಡಿ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಪರಿಶೀಲನಾ ಸಭೆ ನಡೆಸಲಿದ್ದಾರೆ.ಸಚಿವರ ಈ ಪ್ರವಾಸವು ಜಿಲ್ಲೆಯ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಶೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.ಈ ಸಂದರ್ಬದಲ್ಲಿ ಶಾಸಕರುಗಳಾದ ದದ್ದಲ ಬಸನಗೌಡ, ಡಾ.ಶಿವರಾಜ ಪಾಟೀಲ್,ಡಿಸಿ ಪೂವಿತಾ, ಜಿ.ಪಂ ಸಿಇಓ ಈಶ್ವರ ಕಾಂದು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular

Recent Comments