ರಾಯಚೂರು,ಜೂ.೨೮- ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆ ಅಂಗವಾಗಿ ಮಗುವಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್ ಚಾಲನೆ ನೀಡಿದರು.ನಗರದ ಕೆಇಬಿ ಶಾಲೆಯಲ್ಲಿ ಮಾನವ ಹಕ್ಕುಗಳ ಸಂಘಟನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಅರೋಗ್ಯ ಇಲಾಖೆಗಳ ಸಹಯೋಗದಲ್ಲಿ ಅಯೋಜಿಸಲಾಗಿದ್ದ ಲಸಿಕಾ ಕಾರ್ಯಕ್ರಮ ಚಾಲನೆ ನೀಡಿದರು.ಪ್ರತಿ ಮಗು ಲಸಿಕೆಯಿಂದ ವಂಚಿತವಾಗದಂತೆ ಪಾಲಕರು ಲಸಿಕೆ ಪಡೆಯಬೇಕು.ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.ಸ್ವಯಂಸೇವಾ ಸಂಸ್ಥೆಗಳು, ಸಾರ್ವಜನಿಕ ರು ಕೈಜೋಡಿಸಿ ಯಶಸ್ವಿ ಗೊಳಿಸಬೇಕು ಎಂದರು.ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಟಾನ ಸಮಿತಿ ಅದ್ಯಕ್ಷ ಪವನ ಕಿಶೋರ್ ಪಾಟೀಲ್,ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುರೇಂದ್ರಬಾಬು, ಡಿಡಿಪಿಐ ಮಲ್ಲಿಕಾರ್ಜುನ, ಡಾ.ನಂದಿತಾ,ಚಂದ್ರಕಾಂತ ವಕೀಲ,ದಂಡಪ್ಪ ಬಿರಾದಾರ ಸೇರಿದಂತೆ ಅನೇಕರು ಭಾಗಿಯಾದರು.





Recent Comments