ರಾಯಚೂರು,ಜು.೨೮-“ನಾನು ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಪೋತ್ನಾಳ ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸಿ ಆದ್ಯತೆಯ ಮೇರೆಗೆ ಮೊದಲ ಬಾರಿಗೆ ಸರ್ಕಾರಿ ಪ್ರೌಢಶಾಲೆ ನಿರ್ಮಾಣ ಮಾಡಿಸಿದ್ದೆ. ಬಳಿಕ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದ ಪೋತ್ನಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅನುಕೂಲವಾಗಲೆಂದು ಕಾಲೇಜು ಕಟ್ಟಡವನ್ನೂ ನಿರ್ಮಿಸಲಾಗಿದೆ” ಈಗ ಈ ಶಾಲಾ -ಕಾಲೇಜಿನಲ್ಲಿ ಓದುವ ಮಕ್ಕಳ ದೈಹಿಕ ಬೆಳವಣಿಗೆಗಾಗಿ 1 ಕೋಟಿ ರೂ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಿದ್ದೇವೆ ಎಂದು ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.ಪೋತ್ನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಹಟ್ಟಿ ಚಿನ್ನದಗಣಿಯ ಸಿಎಸ್ ಆರ್ ಅನುದಾನದ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕ್ರೀಡಾಂಗಣ ಕಾಮಗಾರಿಗೆ ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು, ಶಾಸಕ ಹಂಪಯ್ಯ ನಾಯಕಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.”ಶಾಲೆ ಹಾಗೂ ಕಾಲೇಜು ಕಟ್ಟಡಗಳ ನಿರ್ಮಾಣ ಸಂದರ್ಭದಲ್ಲಿ ವಾರಕ್ಕೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸುತ್ತಿದ್ದೆ. ಗುಣಮಟ್ಟದ ಕಾಮಗಾರಿ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ನಮ್ಮ ಉದ್ದೇಶವಾಗಿತ್ತು” ಎಂದು ಅಂದಿನ ಅವರ ಕಾರ್ಯ ವೈಕರಿಯ ಬಗ್ಗೆ ಮೆಲಕು ಹಾಕಿ ಮಾತನಾಡಿದರು.ನಂತರ ಶಾಸಕರಾದ ಹಂಪಯ್ಯ ನಾಯಕ ಅವರು ಮಾತನಾಡಿ, “ಪ್ರಸ್ತುತ ಶಾಲೆ ಹಾಗೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಮತ್ತು ಕ್ರೀಡಾ ಪ್ರತಿಭೆ ವೃದ್ಧಿಯಾಗುವ ಉದ್ದೇಶದಿಂದ ₹1 ಕೋಟಿ ವೆಚ್ಚದಲ್ಲಿ ಆಧುನಿಕ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಗರ ಮಟ್ಟದ ಕ್ರೀಡಾ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ” ಎಂದು ಹೇಳಿದರು.ಈ ಕಾರ್ಯಕ್ರಮದಲ್ಲಿ ಮಾನ್ವಿ ನಗರ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಪೂರ್ ಸಾಬ್, ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಖಾಲಿದ್ ಅಹ್ಮದ್, ಬಿಇಓ ಚಂದ್ರಶೇಖರ್, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ್ ಡಾ. ಬಸವರಾಜಪ್ಪ ಕುಮಾರಸ್ವಾಮಿ, ಶರ್ಪುದ್ದೀನ್, ಮಲ್ಲನಗೌಡ ಡಾ. ಗುರು ಶರ್ಮ, ಖಾಲಿದ್ ಗುರು, ಸುಭಾಷ್ ನಾಯಕ್, ದೊಡ್ಡಬಸಪ್ಪಗೌಡ, ಪಂಪನಗೌಡ ಪೋತನಾಳ, ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಶಾಲೆಯ ಮಕ್ಕಳು ಉಪಸ್ಥಿತರಿದ್ದರು.





Recent Comments