Wednesday, July 29, 2026
Google search engine
Homeರಾಯಚೂರುಮಹಿಳಾ ಆಯೋಗದ ಅಧ್ಯಕ್ಷರಿಂದ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡ ಪರಿಶೀಲನೆ: ನೀರಿನ ವ್ಯವಸ್ಥೆ...

ಮಹಿಳಾ ಆಯೋಗದ ಅಧ್ಯಕ್ಷರಿಂದ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡ ಪರಿಶೀಲನೆ: ನೀರಿನ ವ್ಯವಸ್ಥೆ ಗೆ ತಾಕೀತು

ರಾಯಚೂರು ಜು. 10-  ರಾಯಚೂರಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಮಾದರಿ ಪದವಿ ಕಾಲೇಜು ಇವರ ಸಹಯೋಗದಲ್ಲಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ಉನ್ನತ ಶಿಕ್ಷಣ ಇಲಾಖೆ-ರಾಷ್ಟ್ರೀಯ ಉಚ್ಛತರ ಶಿಕ್ಷಾ ಅಭಿಯಾನ ಅನುದಾನದ ಅಡಿಯಲ್ಲಿ ರಾಯಚೂರು ನಗರದ ಸಿದ್ರಾಂಪುರದಲ್ಲಿ 12 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರ್ಕಾರಿ ಮಾದರಿ ಪದವಿ ಕಾಲೇಜು ಕಟ್ಟಡಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅಲ ಶುಕ್ರವಾರ ‌ದಂದು ಭೇಟಿ ನೀಡಿ ಪರಿಶೀಲನೆ ಮಾಡಿದರು.ಕಾಲೇಜ್ ಕಟ್ಟಡದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಯಾವುದೇ ಕಾಮಗಾರಿ ಪ್ರಾರಂಭಿಸುವ ಮುಂಚೆ ಬೋರವೆಲ್ ಹಾಕಿಸುವ ಪದ್ದತಿ ಇದೆ. ಆದರೆ ರಾಯಚೂರಿನ ಸಿದ್ರಾಂಪುರ ಕಟ್ಟಡ ಪೂರ್ಣಗೊಂಡಿದ್ದರು. ನೀರು ಸೌಲಭ್ಯವಿಲ್ಲ. ದೊಡ್ಡ ಕಟ್ಟಡವಿದ್ದು, ಹೊರಗಿನಿಂದ ನೀರು ತರುವುದು ಸೂಕ್ತವೆ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಮಹಿಳಾ ಆಯೋಗದ ಅಧ್ಯಕ್ಷರು‌ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಭಾಗದಿಂದ ನಗರ‌ ಪ್ರದೇಶಕ್ಕೆ ಹೆಣ್ಣುಮಕ್ಕಳನ್ನು ಶಿಕ್ಷಣಕ್ಕಾಗಿ ಕಳಿಸುವುದು ಕಡಿಮೆ. ಸರ್ಕಾರದ ಅನುದಾನ ಮಹಿಳೆಯರಿಗೆ ಸದುಪಯೋಗ ಆಗಬೇಕು. ರಾಯಚೂರಿಗೆ ಬರುವ ಪ್ರತಿಬಾರಿ ನೀರಿನ ಸಮಸ್ಯೆದೆ ದೂರುಗಳು ಬರುತ್ತವೆ. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದರು.ನಂತರ ಸರ್ಕಾರಿ ಮಾದರಿ ಪದವಿ ಕಾಲೇಜ್ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ವಸತಿ ನಿಲಯಕ್ಕೆ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಅಲ್ಲದೆ ಮಹಿಳಾ ವಸತಿ ನಿಲಯದ ಭದ್ರತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಸರ್ಕಾರದ ಅನುದಾನವನ್ನು ಪೋಲ್ ಆಗದಂತೆ ನೋಡಿಕೊಳ್ಳಬೇಕು. ವಸತಿ ನಿಲಯದ ಸುತ್ತಲೂ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ದೂರುಗಳು ಬಂದಿದ್ದುಅವುಗಳನ್ನು ಮಟ್ಟ ಹಾಕಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಂತರ ನಿಲಯದ ವಿವಿಧ ಕೊಠಡಿಗಳನ್ನು ಪರಿಶೀಲಿಸಿದರು. ನಿಲಯದ ಸಣ್ಣಪುಟ್ಟ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ಮಹಿಳಾ ‌ಮತ್ತು‌ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.***

RELATED ARTICLES
- Advertisment -
Google search engine

Most Popular

Recent Comments