ರಾಯಚೂರು, ಜೂನ್ 16: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಅವರನ್ನು ಬೆದರಿಕೆ ಹಾಕಿದ್ದ ಆರೋಪಿಯನ್ನು ಸಿಂಧನೂರು ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸಿಂಧನೂರು ನಗರದ ವಾರ್ಡ್ ನಂ.31 ನಿವಾಸಿ ಬಾಬುಸಾಬ್ ಖಾದರ್ ಸಾಬ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಕಳೆದ 8 ಮತ್ತು 9 ವರ್ಷಗಳಿಂದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.ಪೊಲೀಸ್ ತನಿಖೆಯಲ್ಲಿ ಆರೋಪಿಯು ಬಾಲಕಿಯರಿಗೆ ಬೆದರಿಕೆ ಹಾಕಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಸಿಂಧನೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ಸಂಬಂಧ ಪೋಕ್ಸೊ (POCSO) ಕಾಯ್ದೆ ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.





Recent Comments