Wednesday, July 29, 2026
Google search engine
Homeರಾಯಚೂರುರಾಯಚೂರು ನಗರರಾಯಚೂರು: ತಾಲ್ಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಮನೆ ಕಳ್ಳತನ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ದಲ್ಲಿ ಭಾಗಿಯಾಗಿದ್ದ...

ರಾಯಚೂರು: ತಾಲ್ಲೂಕಿನ ಚಿಕ್ಕಸೂಗೂರು ಗ್ರಾಮದಲ್ಲಿ ಮನೆ ಕಳ್ಳತನ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ದಲ್ಲಿ ಭಾಗಿಯಾಗಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ

ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ 3.51 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಅಂಜಿನಯ್ಯ ಆಲಿಯಾಸ್ ಅಂಜಿ (26) ಹಾಗೂ ಪರಶುರಾಮ ಆಲಿಯಾಸ್ ಪರಶ್ಯಾ (24) ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಚಿಕ್ಕಸೂಗೂರು ಗ್ರಾಮದ ಮನೆ ಕಳ್ಳತನದ ಜೊತೆಗೆ ರಾಯಚೂರು ಗ್ರಾಮೀಣ ಮತ್ತು ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.ಬಂಧಿತರಿಂದ 20 ಗ್ರಾಂ ಚಿನ್ನದ ಆಭರಣ, 300 ಗ್ರಾಂ ಬೆಳ್ಳಿ ಆಭರಣ, ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 3,51,500 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖಾಧಿಕಾರಿಗಳಾದ ಎಂ.ಡಿ. ಪಾಷಾ, ಶಾಂತಮ್ಮ ಹಾಗೂ ಪೊಲೀಸ್ ಸಿಬ್ಬಂದಿ ಮಹಿಬೂಬ್ ಅಲಿ, ಶಾಂತಕುಮಾರ, ಮಲ್ಲೇಶ್, ನಾಗೇಂದ್ರ, ರಮೇಶ, ನರಸಿಂಹಲು, ಹುಸೇನಪ್ಪ, ಖುರ್ಷಿದ್ ಅಲಿ, ಮಹೇಶ್ವರ ರೆಡ್ಡಿ ಮತ್ತು ಮಲ್ಲನಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪೊಲೀಸರ ಕಾರ್ಯಚರಣೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments