ರಾಯಚೂರು. ಜು. 10.-ರಾಯಚೂರಿನಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಪ್ರಾರಂಬಿಸಲು ಇಲಾಖೆ ಅಯುಕ್ತರೊಂದಿಗೆ ಚರ್ಚಿಸಿದ್ದು ಕೇಂದ್ರ ಪ್ರಾರಂಬಿಸಲು ಸರಕಾರದ ಗಮನ ಸೆಳೆಯುವ ದಾಗಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದ್ರಿ ಹೇಳಿದರು. ಅವರಿಂದು ಮಾಧ್ಯಮ ಗಳೊಂದಿಗೆ ಮಾತನಾಡಿ ಶಿಕ್ಷಣ, ವಿದ್ಯಾರ್ಥಿ ವಸತಿ ನಿಲಯ ಮತ್ತು ಮೂಲಸೌಕರ್ಯಗಳ ಕುರಿತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ನಮ್ಮ ಭಾಗದಲ್ಲಿ ಕಾಲೇಜುಗಳಿದ್ದರೂ, ಮೂಲಭೂತ ಸೌಲಭ್ಯಗಳಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ನಾನು ಮಾಡುತ್ತೇನೆ ಎಂದು ಹೇಳಿದರು.ಅವರು ಶುಕ್ರವಾರ ಬೆಳಿಗ್ಗೆ ಸಿದ್ರಾಂಪುರನಲ್ಲಿರುವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ್ದೆ. ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಉತ್ತಮ ಕಟ್ಟಡ ನಿರ್ಮಿಸಿದ್ದರೂ, ಅದರ ನಿರ್ವಹಣೆ ಸರಿಯಾಗಿಲ್ಲ. ಮೂರು ವರ್ಷಗಳಿಂದ ಅದು ಆರಂಭವಾಗಿಲ್ಲ ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕೊಠಡಿಗಳಲ್ಲಿ ಮಂಚ, ಬೀರು, ವಿದ್ಯುತ್ ಸ್ವಿಚ್‌ಗಳು, ವೈರ್‌ಗಳು, ಕೊಳವೆಗಳು ಸೇರಿದಂತೆ ಅನೇಕ ವಸ್ತುಗಳು ಹಾಳಾಗಿವೆ ಅಥವಾ ಕಳುವಾಗಿವೆ. ಈ ಸ್ಥಿತಿಯನ್ನು ನೋಡಿದಾಗ ತುಂಬಾ ಬೇಸರವಾಗುತ್ತದೆ.ವಿದ್ಯಾರ್ಥಿಗಳು ಕೆಲವು ಕಡೆ ವಸತಿ ಸೌಲಭ್ಯವಿಲ್ಲದೆ ಖಾಸಗಿ ವಸತಿಗಳಲ್ಲಿ ಹಣ ನೀಡಿ ಉಳಿಯುವ ಪರಿಸ್ಥಿತಿ ಇದೆ. ಆದರೆ ಇಷ್ಟೊಂದು ದೊಡ್ಡ ವಸತಿ ನಿಲಯದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲ. ನೀರಿನಂತಹ ಮೂಲಭೂತ ಸೌಲಭ್ಯವಿಲ್ಲದೆ ಕಟ್ಟಡ ನಿರ್ಮಿಸಿರುವುದು ಅತ್ಯಂತ ದುಃಖಕರ ಸಂಗತಿ. ಈ ರೀತಿಯ ಯೋಜನೆಗಳಿಂದ ಸಾರ್ವಜನಿಕ ಹಣ ವ್ಯರ್ಥವಾಗಬಾರದು.ಈ ಎಲ್ಲಾ ಸಮಸ್ಯೆಗಳ ಕುರಿತು ಸಂಬಂಧಿತ ಇಲಾಖೆ, ಅಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಸುರಕ್ಷಿತ ವಸತಿ ಮತ್ತು ಅಗತ್ಯ ಮೂಲಸೌಕರ್ಯಗಳು ದೊರೆಯುವಂತೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.





Recent Comments