* * ರಾಯಚೂರು: ಜು.10 ರಂದು ದೇವದುರ್ಗ ತಾಲೂಕಿನ ಕರಡಿಗುಡ್ಡ ಗ್ರಾಮ ಪಂಚಾಯತಿಯ ಬಾಗೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಶೈಕ್ಷಣಿಕ ಚಟುವಟಿಕೆಗಳು ಹಾಗೂ ಇಲಾಖೆಗಳ ಪ್ರಗತಿಯನ್ನು ಜಿ.ಪಂ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ರವರು ಪರಿಶೀಲಿಸಿದರು.ಮೊದಲಿಗೆ ದೇವದುರ್ಗದಲ್ಲಿರುವ ಕೆ.ಪಿ.ಎಸ್.ಸಿ ಹೆಣ್ಣು ಮಕ್ಕಳ ಶಾಲೆ ಆವರಣದಲ್ಲಿರುವ ಕಿಶೋರಿ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದಲ್ಲಿ ಪ್ರತಿದಿನ ನಡೆಯುವ ಉಪನ್ಯಾಸ ಕಾರ್ಯಕ್ರಮಗಳು, ಸಂಪನ್ಮೂಲ ವ್ಯಕ್ತಿಗಳ ಲಭ್ಯತೆ ಹಾಗೂ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಶಾಲೆಯ 8 , 9 ಮತ್ತು 10 ನೇ ತರಗತಿಯ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಕಂಪ್ಯೂಟರ್ ಸಾಕ್ಷರತೆ, 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಗಣಿತ ಮತ್ತು ಸಂಖ್ಯಾಶಾಸ್ತ್ರ, ಇಂಗ್ಲಿಷ್ ಗ್ರಾಮರ್ ಹಾಗೂ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಪೂರ್ವ ಸಿದ್ಧತೆಗಾಗಿ ನೀಡಲಾಗುತ್ತಿರುವ ತರಬೇತಿಗಳ ಕುರಿತು ಮಾಹಿತಿ ಪಡೆದರು. ಬಳಿಕ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ, ಕಿಶೋರಿ ಕೇಂದ್ರದಲ್ಲಿ ಆಯೋಜಿಸಲಾದ ಉಪನ್ಯಾಸ ಹಾಗೂ ತರಬೇತಿ ಕಾರ್ಯಕ್ರಮಗಳಿಂದ ವಿದ್ಯಾರ್ಥಿನಿಯರಿಗೆ ದೊರೆತಿರುವ ಪ್ರಯೋಜನಗಳ ಕುರಿತು ವಿದ್ಯಾರ್ಥಿನಿಯರಿಂದಲೇ ಅಭಿಪ್ರಾಯಗಳನ್ನು ಸಂಗ್ರಹಿಸಿದರು.ತದನಂತರ ಕರಡಿಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೂರು ಗ್ರಾಮಕ್ಕೆ ಭೇಟಿ ನೀಡಿ, ವಿಬಿಜಿ–ರಾಮ್ಜಿ ಕಾಮಗಾರಿ ಸ್ಥಳವನ್ನು ಪರಿಶೀಲಿಸಿದರು. ಅಳತೆಗೆ ತಕ್ಕಂತೆ ಕೆಲಸ ಮಾಡಿದರೆ ಪೂರ್ತಿ ಪ್ರಮಾಣದ 382/- ರೂ ದಿನದ ಕೂಲಿ ದೊರೆಯುತ್ತದೆ. ಈ ಹೊಸ ಕೆರೆ ನಿರ್ಮಾಣದಿಂದ ಅಂತರ್ಜಲ ಸಂವರ್ದನೆ , ದನಕರುಗಳಿಗರ ಕೂಡಿಯುವ ನೀರು ಲಭ್ಯತೆ ಮೇವು ಬೇಳೆಯಲು ಸಹಾಯವಾಗುತ್ತದೆ ಎಂದು ತಿಳಿಸಿದರು. ನಂತರ ಗ್ರಾಮದ ಅಂಗನವಾಡಿ ಕೇಂದ್ರ ವೀಕ್ಷಿಸಿ, ಮೂಲಸೌಕರ್ಯ ಮತ್ತು ಶೈಕ್ಷಣಿಕ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಗಳ ಕಾರ್ಯವೈಖರಿ ಹಾಗೂ ಯೋಜನೆಗಳ ಅನುಷ್ಠಾನದ ಕುರಿತು ಸಮಗ್ರವಾಗಿ ಪರಿಶೀಲಿಸಿದರು. ಲೋಕಾಯುಕ್ತರು ಜಿಲ್ಲೆಗೆ ಬೇಟಿ ನೀಡುತ್ತಿದ್ದು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಎಚ್ಚರಿಕೆ ನೀಡಿದರು.ಈ ಸಮಯದಲ್ಲಿ ರಾಜೇಂದ್ರ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಪಂ ದೇವದುರ್ಗ ಡಾ. ವಾಲ್ಮೀಕಿ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಪಂ ಅರಕೇರ ಅಣ್ಣಾರಾವ ಸಹಾಯಕ ನಿರ್ದೇಶಕರು ವಿಬಿ ರಾಮ್ ಜಿ ಶರ್ಪುನ್ನಿಸ ಬೇಗಂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಸಾರ್ವಜನಿಕ ಶಿಕ್ಷಣ ಇಲಾಖೆ (BEO), ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರ (BRC), ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೆಆರ್ಡಿಎಲ್ (KRDL), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (CDPO), ಸಾಮಾಜಿಕ ಅರಣ್ಯ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳು (THO), ನಿರ್ಮಿತಿ ಕೇಂದ್ರ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






Recent Comments