ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ದಿನದಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಭವ್ಯ ತೆಪ್ಪೋತ್ಸವ ಶ್ರದ್ಧಾ–ಭಕ್ತಿಭಾವದಿಂದ ನೆರವೇರಿತು.ತೆಪ್ಪೋತ್ಸವದ ಬಳಿಕ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿಷ್ಠಿತ ‘ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಮಂತ್ರಾಲಯದ ಎಸ್ಜಿಎಸ್ ವಿದ್ಯಾಪೀಠದ ಪ್ರಾಂಶುಪಾಲರಾದ ಡಾ. ಎನ್. ವಾದಿರಾಜಾಚಾರ್ ಹಾಗೂ ಶಾಸ್ತ್ರಾ ವಿಶ್ವವಿದ್ಯಾಲಯದ ಕುಲಪತಿಗಳಾದ ಎಸ್. ವೈದ್ಯ ಸುಬ್ರಹ್ಮಣ್ಯಂ ಅವರಿಗೆ ಶ್ರೀಮಠದ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಬಳಿಕ ಶ್ರೀ ಪ್ರಹ್ಲಾದ ರಾಜರನ್ನು ಸಿಂಹ ವಾಹನದಲ್ಲಿ ಪ್ರತಿಷ್ಠಾಪಿಸಿ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ಪವಿತ್ರ ಮಂತ್ರಘೋಷ ಹಾಗೂ ಭಜನೆಗಳ ನಡುವೆ ಭಕ್ತರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಭವ್ಯ ಮೆರವಣಿಗೆ ನಡೆಯಿತು.ಆರಾಧನಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.





Recent Comments