ರಾಯಚೂರು,ಆ.೩೧-ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಹಾಗೂ ಸದಸ್ಯರಾದ ಸುನೀಲ್ ಎಂ.ಉಕ್ಕಲಿ, ಎನ್.ದಿವಾಕರ್, ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಹೆಚ್.ಎಸ್.ಶಿವರಾಮು ಅವರು ಆಗಸ್ಟ್. 31 ರಂದು ಸೋಮವಾರ ರಾಯಚೂರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಹವಾಲು ಸ್ವೀಕರಿಸಿದರು. ಆರು ತಿಂಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಅಧಿಕಾರಿಗಳ ಅನುಷ್ಟಾನ ದಲ್ಲಿ ಲೋಪವೆಸಗಿದರೆ ಅಮಾನತ್ತಿಗೆ ಶಿಫಾರಸ್ಸು ಮಾಡುವದಾಗಿ ಎಚ್ಚರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷು ಗಿರಿ. ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೋಹಪಾತ್ರ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.






Recent Comments