Thursday, September 10, 2026
Google search engine
Homeಮುಖ್ಯಾಂಶಗಳುಮಂತ್ರಾಲಯ ಪೀಠಾಧಿಪತಿ ವಿರುದ್ಧ ಅವಹೇಳನ ಆರೋಪ: 13 ಜನರ ವಿರುದ್ದ ಗಡಿಪಾರಿಗೆ ಮನವಿ

ಮಂತ್ರಾಲಯ ಪೀಠಾಧಿಪತಿ ವಿರುದ್ಧ ಅವಹೇಳನ ಆರೋಪ: 13 ಜನರ ವಿರುದ್ದ ಗಡಿಪಾರಿಗೆ ಮನವಿ

ರಾಯಚೂರು: ಸುಕ್ಷೇತ್ರ ಮಂತ್ರಾಲಯ ಹಾಗೂ ಮಂತ್ರಾಲಯ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರತೀರ್ಥರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ವಿಡಿಯೋಗಳನ್ನು ಹರಿಬಿಡುತ್ತಿರುವ ಆರೋಪದ ಮೇಲೆ ಕೆಲವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಲಾಗಿದೆ.ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಹೋಬಳಿಯ ಎಲೆಬಿಚ್ಚಾಲಿ ಗ್ರಾಮದ ನಿವಾಸಿಗಳಾದ ಅಂಗಡಿ ವೀರೇಶ ಹಾಗೂ ಅವರ ಸಹಚರರು ಸೇರಿದಂತೆ ಒಟ್ಟು 13 ಜನರ ವಿರುದ್ಧ ದೂರು ನೀಡಲಾಗಿದೆ.ದೂರಿನಲ್ಲಿ ಅಂಗಡಿ ವೀರೇಶ, ಆಚಾರ, ಶಾಮಾಚಾರಿ ಅಲಿಯಾಸ್ ವೇಣುಗೋಪಾಲ, ವೀರನಗೌಡ, ಜಗನ್ನಾಥಚಾರಿ, ಮಾನ್ವಿ ಪ್ರಹ್ಲಾದ್, ಕಲಬುರಗಿ ಪ್ರಹ್ಲಾದ್, ಸಮೀರ್ ಆಚಾರಿ, ಗೌತಮ ಆಚಾರಿ, ಹರೀಶ್, ಪವನಕುಮಾರ, ಸಮೀರ್ ಆಚಾರ್, ಮೌನೇಶ ಹಾಗೂ ಆನಂದ್ ವಿರುದ್ಧ ಆರೋಪಗಳನ್ನು ಮಾಡಲಾಗಿದೆ.ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ಆರೋಪದೂರುದಾರರ ಪ್ರಕಾರ, ಬಿಚ್ಚಾಲಿ ಗ್ರಾಮದ ಸರ್ವೆ ನಂಬರ್ 35 ಮತ್ತು 37ಕ್ಕೆ ಸಂಬಂಧಿಸಿದ ಒಟ್ಟು 2 ಎಕರೆ 33 ಗುಂಟೆ ಜಮೀನಿನ ಕುರಿತು ಸರ್ಕಾರದ ನಿಯಮಾವಳಿಗಳ ಪ್ರಕಾರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ.ಈ ಜಮೀನಿಗೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳು ಹಾಗೂ ರಾಯಚೂರು ನ್ಯಾಯಾಲಯದಲ್ಲಿ ದಾಖಲಾಗಿದ್ದ ಓಎಸ್ ಪ್ರಕರಣದ ಕುರಿತು ಮಠದ ಪರವಾಗಿ ತೀರ್ಪು ಮತ್ತು ಕ್ರಮಗಳು ನಡೆದಿವೆ ಎಂದು ದೂರುದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.ಆದರೆ, ಈ ಜಮೀನು ತಮ್ಮದೇ ಎಂದು ಹೇಳಿಕೊಂಡು ಕೆಲವರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಂತ್ರಾಲಯ ಕ್ಷೇತ್ರ, ಶ್ರೀ ರಾಘವೇಂದ್ರ ಸ್ವಾಮಿಗಳು ಹಾಗೂ ಪ್ರಸ್ತುತ ಪೀಠಾಧಿಪತಿಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ವಿಡಿಯೋ ಆರೋಪಮಂತ್ರಾಲಯ ಮಠ ಮತ್ತು ಪೀಠಾಧಿಪತಿಗಳ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ತುಣುಕುಗಳನ್ನು ತಯಾರಿಸಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದರಿಂದ ವಿಶ್ವವಿಖ್ಯಾತ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಹಾಗೂ ಪ್ರಸ್ತುತ ಪೀಠಾಧಿಪತಿಗಳ ಗೌರವ ಮತ್ತು ಘನತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ದೂರುದಾರರು ತಿಳಿಸಿದ್ದಾರೆ.ಗ್ರಾಮಗಳಲ್ಲಿ ಸಭೆಗಳನ್ನು ನಡೆಸಿ ಜನರನ್ನು ಪ್ರಚೋದಿಸಲಾಗುತ್ತಿದೆ. ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆಯುತ್ತಿದೆ. ಮಠದ ಸಿಬ್ಬಂದಿ ಹಾಗೂ ಮಠದ ಪರವಾಗಿ ಬರುವ ಭಕ್ತರು ಮತ್ತು ಇತರರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಗಂಭೀರ ಆರೋಪಗಳನ್ನೂ ದೂರಿನಲ್ಲಿ ಮಾಡಲಾಗಿದೆ.ಬಿಚ್ಚಾಲಿಯಲ್ಲಿ ಮತ್ತೆ ಸಂಘರ್ಷದ ವಾತಾವರಣ ಸೃಷ್ಟಿಸುವ ಆರೋಪಈ ಹಿಂದೆ ಬಿಚ್ಚಾಲಿ ಗ್ರಾಮದಲ್ಲಿ ಚರ್ಚ್ ಮತ್ತು ಅಂಜಿನಯ್ಯ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ಹಾಗೂ ಜಗಳ ನಡೆದಿತ್ತು. ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದ್ದರೂ, ಮತ್ತೆ ಜಾತಿ ಮತ್ತು ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ದೂರುದಾರರು ಆತಂಕ ವ್ಯಕ್ತಪಡಿಸಿದ್ದಾರೆ.ಕೆಲವರು ಗ್ರಾಮದಲ್ಲಿ ಮತ್ತೆ ಗಂಭೀರ ಕೋಮು ಸಂಘರ್ಷದ ವಾತಾವರಣ ನಿರ್ಮಿಸಲು ಹುನ್ನಾರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಗುಂಡಾ ಕಾಯ್ದೆ, ಗಡಿಪಾರಿಗೆ ಆಗ್ರಹಹೀಗಾಗಿ ಅಂಗಡಿ ವೀರೇಶ ಸೇರಿದಂತೆ ಆರೋಪಿತರ ವಿರುದ್ಧ ತಕ್ಷಣವೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಗುಂಡಾ ಕಾಯ್ದೆಯಡಿ ಕ್ರಮ ಕೈಗೊಂಡು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಲಾಗಿದೆ.ಬಿಚ್ಚಾಲಿ ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಪೊಲೀಸ್ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ದೂರುದಾರರಾದ ಸಚೀನ್ ಖಾನಾಪೂರು ಹಾಗೂ ಇತರರು ಮನವಿ ಮಾಡಿದ್ದಾರೆ.ದೂರಿನೊಂದಿಗೆ ಪಹಣಿ ಪತ್ರಿಕೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಸಹಿತ ದೂರು‌ನೀಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments