ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30ರವರೆಗೆ ಕಚೇರಿ
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಮನಗಂಡು, ಸರ್ಕಾರಿ ನೌಕರರ ಅನುಕೂಲಕ್ಕಾಗಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಾನವೀಯ ದೃಷ್ಟಿಯಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಚೇರಿ ಸಮಯವನ್ನು ಬೆಳಿಗ್ಗೆ 8.00ರಿಂದ ಮಧ್ಯಾಹ್ನ 1.30ರವರೆಗೆ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೆ 5% ರಿಯಾಯಿತಿ: ಏಪ್ರಿಲ್ ಅಂತ್ಯದೊಳಗೆ ಸುವರ್ಣ ಅವಕಾಶ
ಬದಲಾದ ಸಮಯದಲ್ಲಿ ಸರ್ಕಾರಿ ನೌಕರರು ಯಾವುದೇ ಲೋಪವಿಲ್ಲದೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಸೇವೆ ನೀಡಲು ಸೂಚಿಸಲಾಗಿದೆ.
ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೀಡುವ ಸೂಚನೆಗಳಂತೆ, ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಆದೇಶ ಹೊರಡಿಸಿದ್ದಾರೆ.




Recent Comments