Wednesday, April 15, 2026
Google search engine
Homeರಾಯಚೂರುವಿಕಲಚೇತನರ ಪುನರ್ವಸತಿ ಕೇಂದ್ರ ಕಟ್ಟಡಕ್ಕೆ ಭೂಮಿ ಪೂಜೆ

ವಿಕಲಚೇತನರ ಪುನರ್ವಸತಿ ಕೇಂದ್ರ ಕಟ್ಟಡಕ್ಕೆ ಭೂಮಿ ಪೂಜೆ

ರಾಯಚೂರು: 2025-26ನೇ ಸಾಲಿನ ಅನುದಾನದಡಿ ವಿಕಲಚೇತನರಿಗಾಗಿ ನಿರ್ಮಾಣವಾಗುವ ಪುನರ್ವಸತಿ ಕೇಂದ್ರ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿಕಲಚೇತನರ ಸಬಲೀಕರಣಕ್ಕೆ ಇಂತಹ ಕೇಂದ್ರಗಳು ಅತ್ಯಂತ ಉಪಯುಕ್ತವಾಗುತ್ತವೆ ಎಂದು ಹೇಳಿದರು.

ಇದನ್ನೂ ಓದಿ: ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬರದಂತೆ ಮುನ್ನೆಚ್ಚರಿಕೆ ವಹಿಸಲು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೂಚನೆ

ಈ ಯೋಜನೆ ರಾಜ್ಯ ಹಣಕಾಸು ಆಯೋಗ ಹಾಗೂ ಜಿಲ್ಲಾ ಪಂಚಾಯತ್ ಅನುದಾನದಡಿ ಕೈಗೆತ್ತಿಕೊಳ್ಳಲಾಗಿದ್ದು, ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಿದೆ.

ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ದದ್ದಲ್, ಶಾಸಕ ಡಾ. ಶಿವರಾಜ ಪಾಟೀಲ್, ಪವನ್ ಕಿಶೋರ್ ಪಾಟೀಲ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments