ರಾಯಚೂರು ಜೂ.೨೭- ನಿಯಮಿತವಾಗಿ ಯೋಗ ರೂಢಿಸಿಕೊಂಡರೆ ದೈಹಿಕಮತ್ತು ಮಾನಸಿಕ ಸದೃಡತೆ ಸಾಧ್ಯವಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.ವೆಂಕಟ್ ಸಿಂಗ್ ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ, ಆಯುಷ್ಯ ಇಲಾಖೆ,ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಯೋಗ ಉದ್ದೇಶಿಸಿ ಮಾತನಾಡಿದರು. ಯೋಗವು ಶರೀರಕ್ಕೆ ಆರೋಗ್ಯವನ್ನು, ಮನಸ್ಸಿಗೆ ಆನಂದವನ್ನು ಕೊಟ್ಟು, ಕ್ರಿಯಾಶೀಲವಾಗಿರಲು ದಿವ್ಯ ಔಷಧವಾಗಿದೆ. ಒತ್ತಡದ ಜೀವನದ ಮಧ್ಯೆ ಈ ಸಾಧನೆಗೆ ದಿನದ ಕನಿಷ್ಠ ಕೆಲ ಸಮಯ ಮೀಸಲಿಡಬೇಕು ಎಂದರು.ಯೋಗ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳಿಂದ ಹಿಡಿದು ನೌಕರರವರಿಗೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪತ್ರಿ ದಿನ ಯೋಗ ಮಾಡುವ ಮೂಲಕ ತಮ್ಮ ಒತ್ತಡ ಜೀವನದಿಂದ ಹೊರಬರಬೇಕು. ಪರೀಕ್ಷೆಯಲ್ಲಿ ಒಳ್ಳೆಯ ಫಲಿತಾಂಶವನ್ನು ಪಡೆಯಬೇಕೆಂದರು.ಇದಕ್ಕೂ ಮೊದಲು ನಗರದ ಮಹ್ಮಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಯೋಗಾಸನಗಳ ಅಭ್ಯಾಸ ಮಾಡಿಸಿದರು.ಯೋಗ ಶಿಕ್ಷಕರು ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಅರ್ಧ ಉಷ್ಟ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಹೇಳಿಕೊಟ್ಟರು.ಕಾರ್ಯಕ್ರಮದಲ್ಲಿ ಎಸ್ಪಿ ಅರುಣ್ಷಾಂಗಿರಿ, ಸಹಾಯಕ ಅಯುಕ್ತ ಡಾ.ಹಂಪಣ್ಣ ಸಜ್ನನ ,ಕ್ರೀಡಾಧಿಕಾರಿ ವಿರೇಶ ನಾಯಕ ಸೇರಿದಂತೆ ಅನೇಕರು ಪಾಲ್ಗೊಂಡಿದ್ದ ಗಣ್ಯರು, ವಿದ್ಯಾರ್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಯೋಗ ಅಭ್ಯಾಸ ಮಾಡಿದರು. ನಂತರ ಯೋಗ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.*ಪ್ರಶಸ್ತಿ ವಿತರಣೆ:* 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ವಿವಿಧ ವಯೋಮಾನದ ಬಾಲಕ, ಬಾಲಕಿಯರಿಗೆ ವಿವಿಧ ಗಣ್ಯರಿಂದ ಪ್ರಶಸ್ತಿ ಪತ್ರ ಹಾಗೂ ಪದಕವನ್ನು ನೀಡಿ, ಗೌರವಿಸಲಾಯಿತು.ನಂತರ ರಾಯಚೂರಿನ ನವ ಚೇತನ ಶಾಲೆಯ ವಿದ್ಯಾರ್ಥಿಗಳಿಂದ ಯೋಗ ನೃತ್ಯ ಮಾಡಲಾಯಿತು.ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ, ರಾಯಚೂರು ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥ ಸ್ಮಿತಾ ಅಕ್ಕೊರು, ಯೋಗ ಶಿಕ್ಷಕ ತಿಮ್ಮಪ್ಪ ವಡ್ಡಿಪಲ್ಲಿ, ಯೋಗ ನ್ಯಾಚೋರೋಪತಿ ವೈದ್ಯಾಧಿಕಾರಿ ಡಾ.ಪೂಜಾ ಸೇರಿದಂತೆ ವಿವಿಧ ಸಂಘ, ಸಂಸ್ಥೆಯ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.





Recent Comments