Thursday, June 4, 2026
Google search engine
Homeರಾಯಚೂರುದೇವದುರ್ಗಹೊಂಡದಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಹೊಂಡದಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ರಾಯಚೂರು: ಈಜಲು ತೆರಳಿದ್ದ ಯುವಕನೊಬ್ಬ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಬಿಸಾಬ್ (18) ಮೃತ ಯುವಕನಾಗಿದ್ದಾನೆ. ಸ್ನೇಹಿತರೊಂದಿಗೆ ಗ್ರಾಮದ ಹೊಂಡಕ್ಕೆ ಈಜಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈಜಾಡುತ್ತಿದ್ದ ಸಂದರ್ಭದಲ್ಲಿ ನಬಿಸಾಬ್ ಹೊಂಡದ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ. ಸ್ನೇಹಿತರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ, ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಧಾವಿಸಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಜಾಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular

Recent Comments