ರಾಯಚೂರು: ರಾಯಚೂರು ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ, ಕರ್ನಾಟಕ ಅರ್ಭನ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಅಂಡ್ ಫೈನಾನ್ಸ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಪೂವಿತಾ ಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಯಚೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ನಿತೀಶ್ ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದೇ ಆದೇಶದಲ್ಲಿ, ಬೆಂಗಳೂರು ಮಹಾನಗರ ಪಾಲಿಕೆಯ ಅಭಿವೃದ್ಧಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದ ದಲ್ಜೀತ್ ಕುಮಾರ್ ಅವರನ್ನು ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.




Recent Comments