ರಾಯಚೂರು: ಉಪಚುನಾವಣೆಯಲ್ಲಿ ಬಿಜೆಪಿ ಗೆಲುವುದು ಖಚಿತವಾಗುತ್ತದೆ. ಎಂದು ಸಿಂಧನೂರಿನಲ್ಲಿ ಉಪಚುನಾವಣೆ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕದ ಉಪಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತಿಷ್ಠೆಯಾಗಿ ಕೆಲಸ ಮಾಡುತ್ತಿವೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಹಿನ್ನಲೆಯಲ್ಲಿ ಈ ಬಾರಿ ಬಿಜೆಪಿ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಬಾಗಲಕೋಟೆಗೆ ತೆರಳಿ ಎರಡು ಸಭೆಗಳನ್ನು ನಡೆಸಲಿದ್ದೇನೆ. ನಾಳೆ ಇಡೀ ದಿನ ಬಾಗಲಕೋಟೆಯಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಎರಡೂ ಪಕ್ಷಗಳ ನಡುವೆ ತೀವ್ರ ಪೈಪೋಟಿ ಇದೆ. ಗೆಲ್ಲಬೇಕು ಎಂಬ ಉದ್ದೇಶದಿಂದ ಎಲ್ಲರೂ ಶ್ರಮಿಸುತ್ತಿದ್ದಾರೆ. ಈ ಬಾರಿ ಗೆಲುವು ಬಿಜೆಪಿಗೆ ಬರುತ್ತದೆ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
ಟಿಕೆಟ್ ವಿಚಾರಕ್ಕಿಂತಲೂ ಪ್ರಸ್ತುತ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಜನರ ಮನೋಭಾವ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.




Recent Comments