Friday, June 5, 2026
Google search engine
HomeBlog₹12 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ

₹12 ಕೋಟಿ ವೆಚ್ಚದಲ್ಲಿ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ

ರಾಯಚೂರು: ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸುಮಾರು ₹12 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಲ್ಯಾಣ ಮಂಟಪದ ಭೂಮಿ ಪೂಜೆ ಕಾರ್ಯಕ್ರಮ ಇಂದು ನಗರದ ರಾಮಲಿಂಗೇಶ್ವರ ಮೈದಾನದಲ್ಲಿ ನೆರವೇರಿತು.

ನಗರದ ರಾಮಲಿಂಗೇಶ್ವರ ಮೈದಾನದಲ್ಲಿ ಆಯೋಜಿಸಿದ್ದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು, ಶಾಸಕರು ಹಾಗೂ ಶ್ರೀಮಠದ ಸ್ವಾಮೀಜಿಗಳು ಭಾಗವಹಿಸಿ ಪೂಜೆ ನೆರವೇರಿಸಿ ಯೋಜನೆಗೆ ಚಾಲನೆ ನೀಡಿದರು. ಸಮಾಜದ ಸದಸ್ಯರ ಸಹಕಾರದಿಂದ ಈ ಕಲ್ಯಾಣ ಮಂಟಪ ನಿರ್ಮಾಣವಾಗಲಿದ್ದು, ಭವಿಷ್ಯದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಕೇಂದ್ರವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಹಿರೆಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ, ಮಂಗಳವಾರಪೇಟೆ ಹಿರೆಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕರಾದ ಡಾ. ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ ಹಾಗೂ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಸಮಾಜದ ಅಭಿವೃದ್ಧಿಗೆ ಇಂತಹ ಮೂಲಸೌಕರ್ಯಗಳ ಅಗತ್ಯವಿದ್ದು, ಕಲ್ಯಾಣ ಮಂಟಪ ನಿರ್ಮಾಣದಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಸನಗೌಡ ಬ್ಯಾಗವಾಟ, ಶರಣಬೂಪಾಲ ನಾಡಗೌಡ, ದರೂರ ಬಸವರಾಜ, ಕೇಶವರೆಡ್ಡಿ, ಪವನ್ ಕಿಶೋರ ಪಾಟೀಲ್, ದಾನಮ್ಮ ಸೇರಿದಂತೆ ಸಮಾಜದ ಸದಸ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments