Friday, March 27, 2026
Google search engine
HomeBlogಕೇಂದ್ರ ಜಮೀನು ಒದಗಿಸಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ: ಸಚಿವ ಶಿವಾನಂದ ಪಾಟೀಲ್

ಕೇಂದ್ರ ಜಮೀನು ಒದಗಿಸಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ: ಸಚಿವ ಶಿವಾನಂದ ಪಾಟೀಲ್

ರಾಯಚೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಸುಮಾರು 7,500 ಎಕರೆ ಭೂಮಿ ಇದ್ದು, ಅದರಲ್ಲಿ 15 ಎಕರೆ ಭೂಮಿಯನ್ನು ಜವಳಿ ಇಲಾಖೆಗೆ ಮಂಜೂರು ಮಾಡಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡುವ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಬಸನಗೌಡ ಬಾದರ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜವಳಿ ಪಾರ್ಕ್ ಸ್ಥಾಪನೆಗಾಗಿ 15 ಎಕರೆ ಭೂಮಿಯನ್ನು ಗುರುತಿಸಿ ಇಲಾಖೆಗೆ ಹಸ್ತಾಂತರಿಸಲು ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೆ ಒಂದೇ ಕಡೆ 15 ಎಕರೆ ಸರ್ಕಾರಿ ಭೂಮಿ ಲಭ್ಯವಿಲ್ಲ ಎಂಬ ಮಾಹಿತಿ ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ತಾಪುರ ಕ್ಷೇತ್ರದಲ್ಲಿ ₹1,069 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಉದ್ಯೋಗ ಅರಸಿ ಸಿಂಧನೂರು ತಾಲೂಕಿನ ಯುವಕ-ಯುವತಿಯರು ರಾಜ್ಯದ ವಿವಿಧ ಭಾಗಗಳಿಗೆ ವಲಸೆ ಹೋಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಜವಳಿ ಪಾರ್ಕ್ ಸ್ಥಾಪನೆಯಾದರೆ ಸ್ಥಳೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಅವರು ಹೇಳಿದರು.
ಆದರೆ ಜವಳಿ ಪಾರ್ಕ್ ನಿರ್ಮಿಸಲು ಅಗತ್ಯ ಪ್ರಮಾಣದ ಸರ್ಕಾರಿ ಭೂಮಿ ಸಿಂಧನೂರು ತಾಲೂಕಿನಲ್ಲಿ ಲಭ್ಯವಿಲ್ಲ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭೂಮಿಯನ್ನು ಈ ಯೋಜನೆಗಾಗಿ ಒದಗಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸರ್ಕಾರ ಭೂಮಿ ಒದಗಿಸಿದರೆ ಪಿಪಿಪಿ (PPP) ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡುವ ಬೇಡಿಕೆಯನ್ನು ಸರ್ಕಾರ ಪರಿಶೀಲಿಸಲಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments