ರಾಯಚೂರು,ಜು.೧೬-ಸಿಂಧನೂರು ತಾಲ್ಲೂಕಿನ ಉಮಲೂಟಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಯುವ ವಕೀಲರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.ಮೃತರನ್ನು ಅನೀಪ ಬೀರಮಲ್ಲಪ್ಪ ನಾಯ್ಕರ (30) ಎಂದು ಗುರುತಿಸಲಾಗಿದೆ. ಗ್ರಾಮದ ಕೃಷಿ ಹೊಂಡಕ್ಕೆ ಕುರಿಗಳಿಗೆ ಮೈ ತೊಳೆಯಲು ತೆರಳಿದ್ದ ವೇಳೆ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಹೊಂಡದ ಹೂಳಿನಲ್ಲಿ ಸಿಲುಕಿಕೊಂಡ ಪರಿಣಾಮ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.ಘಟನೆಯ ಮಾಹಿತಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಹೊಂಡದಿಂದ ಅನೀಪ ಅವರ ಮೃತದೇಹ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಮೃತ ಅನೀಪ ಅವರು ಉಮಲೂಟಿ ಗ್ರಾಮದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ತುರ್ವಿಹಾಳ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.





Recent Comments