Wednesday, July 29, 2026
Google search engine
Homeಮುಖ್ಯಾಂಶಗಳುಘರ್ಷಣೆ ಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಘರ್ಷಣೆ ಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ರಾಯಚೂರು: ಪೆಟ್ರೋಲ್ ಹಾಕಿಸಿಕೊಂಡ ಹಣ ನೀಡುವ ವಿಚಾರದಲ್ಲಿ ಎರಡು ಗುಂಪುಗಳ ಮದ್ಯೆ ಘರ್ಷಣೆಯಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ತಾಲೂಕಿನ ಹಂಚಿನಾಳ ಕ್ಯಾಂಪ್ ನಲ್ಲಿ ಜರುಗಿದೆ. ರಾಯಚೂರು ತಾಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಘರ್ಷಣೆ ಯಲ್ಲಿ ಮೇಘನಾಥ್ (42) ಮೃತಪಟ್ಟಿದ್ದಾರೆ. ಬಾಟಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಮತ್ತು ಪೆಟ್ರೋಲ್ ಬಂಕ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿದೆ ಪೆಟ್ರೋಲ್ ಖರೀದಿಸುವ ವೇಳೆ ಕೇವಲ 10 ರೂಪಾಯಿ ವಿಚಾರಕ್ಕೆ ಘಟನೆ ಜರುಗಿದೆ ಎಂದು ಹೇಳಲಾಗಿದೆ. ಇಡಪನೂರು ಪೊಲೀಸ ಠಾಣೆ ಯಲ್ಲಿ ದೂರು ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments