Saturday, September 12, 2026
Google search engine
Homeರಾಯಚೂರುದೇವದುರ್ಗತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಸೂಚನೆ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಸೂಚನೆ

ರಾಯಚೂರು ಆ. 31 – ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಈ ಘಟನೆಗಳು ನಡೆದಿದ್ದು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಗಮನಕ್ಕೆ ತರಲಾಗಿದ್ದು, ಸಂತ್ರಸ್ತ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಗಿದೆ. ಅಲ್ಲದೆ ಪ್ರಕರಣವನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಅವರು ಹೇಳಿದರು. ಸೋಮವಾರ ಜಿಲ್ಲೆಯ ‌ಹೋಕ್ರಾಣಿ ಗ್ರಾಮದಲ್ಲಿ ಮೃತ ಕು.ಅಶ್ವಿನಿ ಅವರ ಮನೆಗೆ ‌ಭೇಟಿ ನೀಡಿ ನಂತರ ಮಾಧ್ಯಮದವರೊಂದಿಗೆ ಮಾಹಿತಿ ನೀಡಿ ಮಾತನಾಡಿದರು.ಘಟನೆಗೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ವ್ಯಾಪಕ ಸಭೆಗಳನ್ನು ನಡೆಸಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯವಿರುವ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವಂತೆ ಗೃಹ ಸಚಿವರಿಗೆ ತಿಳಿಸಲಾಗಿದೆ, ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಂದು ಜಿಲ್ಲೆಯಲ್ಲೂ ಹಾಗೂ ವಿಶೇಷವಾಗಿ ರಾಯಚೂರು ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು.ಇದೇ ಸಂದರ್ಭದಲ್ಲಿ ಸಂಸದರಾದ ಜಿ.ಕುಮಾರ ‌ನಾಯಕ, ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಭೋಸರಾಜು,ಮಾನ್ವಿ ಶಾಸಕರಾದ ಹಂಪಯ್ಯ ನಾಯಕ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಸಿರವಾರ ತಹಶಿಲ್ದಾರ್ ಚಂದ್ರಶೇಖರ ಪವಾರ್, ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments