Thursday, August 13, 2026
Google search engine
Homeಕೃಷಿ / ಬಜಾರ್ಬರ ಪರಿಸ್ಥಿತಿ ವೀಕ್ಷಣೆ: ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಸಚಿವ ಡಾ.ಅಜಯ್ ಧರ್ಮಸಿಂಗ್

ಬರ ಪರಿಸ್ಥಿತಿ ವೀಕ್ಷಣೆ: ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಸಚಿವ ಡಾ.ಅಜಯ್ ಧರ್ಮಸಿಂಗ್

ರಾಯಚೂರು ಆಗಸ್ಟ್ 08 – ರಾಯಚೂರು ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ್ದು ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿ, ರೈತರ ಸಂಕಷ್ಟವನ್ನು ಅರಿಯುವ ಉದ್ದೇಶದಿಂದ ಮುಖ್ಯಮಂತ್ರಿ ಅವರ ಸೂಚನೆಯಂತೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಕರ್ನಾಟಕ ಸರ್ಕಾರದ ನೂತನ ಸಚಿವರಾದ ಅಜಯ್ ಧರ್ಮಸಿಂಗ್ ಹೇಳಿದರು.ಅವರು ಶನಿವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಮೇವಿನ ಲಭ್ಯತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.ರಾಯಚೂರು ಜಿಲ್ಲೆಗೆ ಮೊದಲ ಬಾರಿಗೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಬರ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿರುವುದು ನನ್ನ ಭಾಗ್ಯ ಹಾಗೂ ಸಂತೋಷದ ವಿಷಯವಾಗಿದೆ. ರಾಯಚೂರು ಜಿಲ್ಲೆ ತಮ್ಮ ಕುಟುಂಬಕ್ಕೆ ಹೊಸದಲ್ಲ. ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರು 1999 ರಿಂದ 2004 ರವರೆಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಾನು ಕೂಡ ಈ ಹಿಂದೆ ಹಲವು ಬಾರಿ ರಾಯಚೂರಿಗೆ ಭೇಟಿ ನೀಡಿದ್ದೆನೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಖ್ಯಮಂತ್ರಿ ಅವರು ಪ್ರತಿಯೊಬ್ಬ ಸಚಿವರಿಗೂ ಒಂದೊಂದು ಜಿಲ್ಲೆಯ ಜವಾಬ್ದಾರಿ ವಹಿಸಿ, ತಮ್ಮ ಜಿಲ್ಲೆಗಳಿಗೆ ತೆರಳಿ ಅಲ್ಲಿನ ರೈತರ ಸಂಕಷ್ಟದಲ್ಲಿ ಭಾಗಿಯಾಗಬೇಕು ಎಂದು ಸೂಚಿಸಿದ್ದರು. ಅದರಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ತೆರಳಿ ರೈತರನ್ನು ನೇರವಾಗಿ ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದು ಹೇಳಿದರು.ರಾಯಚೂರು ಗ್ರಾಮೀಣ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ಮಸ್ಕಿ ಹಾಗೂ ಮಾನ್ವಿ ಸೇರಿದಂತೆ ವಿವಿಧ ತಾಲೂಕುಗಳ ಗ್ರಾಮಗಳಿಗೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಪರಿಸ್ಥಿತಿಯನ್ನು ನೇರವಾಗಿ ವೀಕ್ಷಿಸಲಾಗಿದೆ ನಮ್ಮ ರೈತರು ಬಹಳ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.ಜಿಲ್ಲೆಯಲ್ಲಿ ಸುಮಾರು 2.73 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಅದರಲ್ಲಿ ಸುಮಾರು 1.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿದೆ. ಕೆಲ ರೈತರು ಒಂದಕ್ಕಿAತ ಹೆಚ್ಚು ಬಾರಿ ಬಿತ್ತನೆ ಮಾಡಿದ್ದಾರೆ. ಮಳೆ ಬಾರದ ಕಾರಣ ಎಲ್ಲಾ ಬೆಳೆಗಳು ಹಾಳಾಗಿವೆ ಹಾಗಾಗಿ ಈ ವರದಿಯನ್ನು ಬರುವ ಸಚಿವ ಸಂಪುಟದ ಸಭೆಯಲ್ಲಿ ಸರಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಶಾಸಕರಾದ ಎನ್.ಎಸ್.ಭೋಸರಾಜು, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments