Saturday, August 15, 2026
Google search engine
Homeರಾಯಚೂರುಸಿಂಧನೂರಿನಲ್ಲಿ ಜಲಕೃಷಿ ವಿಮೆ ಹಾಗೂ ಪಿಎಂ-ಎಂಕೆಎಸ್‌ಎಸ್‌ವೈ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ

ಸಿಂಧನೂರಿನಲ್ಲಿ ಜಲಕೃಷಿ ವಿಮೆ ಹಾಗೂ ಪಿಎಂ-ಎಂಕೆಎಸ್‌ಎಸ್‌ವೈ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ

ಸಿಂಧನೂರು, ಜುಲೈ 30: ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಮೀನುಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ (ಎನ್‌ಎಫ್‌ಡಿಬಿ) ಸಂಯುಕ್ತ ಆಶ್ರಯದಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿನ ವಿನಯ್ ರೆಸಿಡೆನ್ಸಿ ಹೋಟೆಲ್‌ನಲ್ಲಿ ಗುರುವಾರ ಜಲಕೃಷಿ ವಿಮೆ ಹಾಗೂ ಪ್ರಧಾನಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ (ಪಿಎಂ-ಎಂಕೆಎಸ್‌ಎಸ್‌ವೈ) ಕುರಿತು ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಯಾದಗಿರಿ ಜಿಲ್ಲೆಗಳ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು (ಡಿಡಿಎಫ್‌ಗಳು), ಸಹಾಯಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಮೀನುಗಾರರು ಮತ್ತು ಜಲಕೃಷಿಕರನ್ನು ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಎನ್‌ಎಫ್‌ಡಿಬಿಯ ತಜ್ಞ ಮೊಹಮ್ಮದ್ ಇಫ್ತಿಕಾರ್ ಹುಸೇನ್ ಅವರು ಜಲಕೃಷಿ ವಿಮೆ ಯೋಜನೆಯ ಅಗತ್ಯತೆ, ಉದ್ದೇಶಗಳು ಹಾಗೂ ರೈತರಿಗೆ ದೊರೆಯುವ ಪ್ರಯೋಜನಗಳ ಕುರಿತು ವಿವರವಾದ ಮಾಹಿತಿ ನೀಡಿದರು.ಬೆಂಗಳೂರು ಮೂಲದ ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿಯ ಪ್ರತಿನಿಧಿ ನವೀನ್ ಅವರು ವಿಮಾ ರಕ್ಷಣೆ, ಪ್ರೀಮಿಯಂ ಸಬ್ಸಿಡಿ ಹಾಗೂ ವಿಮಾ ಕ್ಲೈಮ್ ಸಲ್ಲಿಸುವ ಪ್ರಕ್ರಿಯೆಗಳ ಬಗ್ಗೆ ಸರಳವಾಗಿ ವಿವರಿಸಿದರು.ಇದೇ ವೇಳೆ ರಾಷ್ಟ್ರೀಯ ಮೀನುಗಾರಿಕಾ ಡಿಜಿಟಲ್ ಟ್ರಾನ್ಸ್‌ಫಾರ್ಮೇಷನ್ (ಎನ್‌ಎಫ್‌ಡಿಪಿ) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ವಿಧಾನ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಕುರಿತು ಕಾಮನ್ ಸರ್ವಿಸ್ ಸೆಂಟರ್ (ಸಿಎಸ್‌ಸಿ) ತಂಡದ ಪ್ರತಿನಿಧಿಗಳು ಪ್ರಾತ್ಯಕ್ಷಿಕೆ ನೀಡಿದರು.ಜಲಕೃಷಿಯಲ್ಲಿ ಯಶಸ್ಸು ಸಾಧಿಸಿರುವ ಪ್ರಗತಿಪರ ಕೃಷಿಕ ಶರಣಬಸವ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡು, ಇಲಾಖೆಯ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಮಾಹಿತಿ ನೀಡಿದರು.ಡಿಜಿಟಲ್ ನೋಂದಣಿಗೆ ಕರೆಮೀನುಗಾರಿಕೆ ಕ್ಷೇತ್ರದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ಡಿಜಿಟಲ್ ನೋಂದಣಿ ಅತ್ಯಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇನ್ನೂ ನೋಂದಣಿ ಮಾಡಿಸದಿರುವ ಮೀನುಗಾರರು, ಜಲಕೃಷಿಕರು ಹಾಗೂ ಮಾರಾಟಗಾರರು ತಕ್ಷಣವೇ ಡಿಜಿಟಲ್ ವೇದಿಕೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ನಾಲ್ಕು ಜಿಲ್ಲೆಗಳ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಮೀನುಗಾರರು ಮತ್ತು ಜಲಕೃಷಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments