ರಾಯಚೂರು ಆ. 28 – ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಿಎಸ್ಪಿ ಮುಖಂಡ ಹಾಗೂ ಹೋರಾಟಗಾರ ಭೂಮಾನಂದ ಹದ್ದಿನಾಳ ಅವರನ್ನು 2026ರ ಆಗಸ್ಟ್ 5 ರಂದು ಸುಂಕೇಶ್ವರಹಾಳ ಗ್ರಾಮದ ಬಳಿ ದುಷ್ಕರ್ಮಿಗಳು ಮಾರಕಾಸ್ತçಗಳಿಂದ ಬರ್ಬರವಾಗಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ದಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಭೇಟಿ ಸಾಂತ್ವನ ಹೇಳಿ, ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಿದರು.ಈ ವೇಳೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮಾತನಾಡಿ, ಭೂಮಾನಂದ ಅವರ ಮಕ್ಕಳ ಸಮಾಜ ಕಲ್ಯಾಣ ಇಲಾಖೆಯಿಂದ ಶಿಕ್ಷಣಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ. ಅಲ್ಲದೆ ಭೂಮಾನಂದ ಹೆಂಡತಿಗೆ ಸರ್ಕಾರಿ ನೌಕರರ ನೀಡುವ ಸಂಬAಧಿಸಿದ ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸುವಂತೆ ದೇವದುರ್ಗ ತಹಶಿಲ್ದಾರ್ ನಾಗಮ್ಮ ಕಟ್ಟಿಮನಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಭೂಮಾನಂದ ಪ್ರಕರಣದಡಿ ಈಗಾಗಲೇ ತನಿಖೆ ನಡೆಯುತ್ತಿದ್ದು, ತನಿಖೆಯನ್ನು ಪಾರದರ್ಶಕ ಹಾಗೂ ನ್ಯಾಯಯುತವಾಗಿ ನಡೆಸಲಾಗುತ್ತದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ದೇವದುರ್ಗ ತಹಶಿಲ್ದಾರ್ ನಾಗಮ್ಮ ಕಟ್ಟಿಮನಿ, ದೇವದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ, ಗಬ್ಬೂರ ಪಿಎಸ್.ಐ ಅರುಣ್ ಕುಮಾರ್ ಸೇರಿದಂತೆ ಭೂಮಾನಂದ ಕುಟುಂಬಸ್ಥರು, ಊರಿನ ನಾಗರಿಕರು ಇದ್ದರು.





Recent Comments